Mark 8:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೇಸು ಆ ಕುರುಡನ ಕೈ ಹಿಡಿದುಕೊಂಡು, ಅವನನ್ನು ಊರಿನಿಂದ ಹೊರಕ್ಕೆ ಕರೆದುಕೊಂಡು ಹೋದನು. ನಂತರ ಯೇಸು ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಈಗ ನಿನಗೆ ಕಾಣುತ್ತದೆಯೋ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.
Kannada BSI Bible 2016
ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಕುರುಡನ ಕೈ ಹಿಡುಕೊಂಡು ಊರ ಹೊರಕ್ಕೆ ಕರಕೊಂಡು ಹೋಗಿ ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ಕೈಯಿಟ್ಟು - ನಿನಗೇನಾದರೂ ಕಾಣುತ್ತದೋ? ಎಂದು ಅವನನ್ನು ಕೇಳಿದನು.
Kannada Bible (KNCL) BSI 2016
ಯೇಸು ಕುರುಡನ ಕೈಹಿಡಿದು, ಅವನನ್ನು ಊರ ಹೊರಗೆ ಕರೆದೊಯ್ದರು. ಅವನ ಮೇಲೆ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತಿದೆಯೇ?’ ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆ ಕುರುಡನ ಕೈಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ, ಅವನ ಕಣ್ಣುಗಳ ಮೇಲೆ ಉಗುಳಿ ಅವನ ಮೇಲೆ ತಮ್ಮ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತದೋ?” ಎಂದು ಅವನನ್ನು ಕೇಳಿದರು.