Mark 8:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಶಿಷ್ಯರು, “ಕೆಲವರು ನಿನ್ನನ್ನು, ‘ಸ್ನಾನಿಕ ಯೋಹಾನ’ ಎಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ ಎಂದು ಹೇಳುತ್ತಾರೆ. ಇನ್ನು ಕೆಲವು ಜನರು ನಿನ್ನನ್ನು, ‘ಪ್ರವಾದಿಗಳಲ್ಲಿ ಒಬ್ಬನು’ ಎನ್ನುತ್ತಾರೆ” ಎಂದು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು.
Kannada BSI Bible 2016
ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.
Kannada Bible (KNCL) BSI 2016
ಅದಕ್ಕೆ ಶಿಷ್ಯರು, “ಕೆಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ, ಇನ್ನು ಕೆಲವರು ‘ಎಲೀಯನು,’ ಮತ್ತೆ ಕೆಲವರು ಪ್ರವಾದಿಗಳಲ್ಲಿ ತಾವೂ ಒಬ್ಬರು ಎನ್ನುತ್ತಾರೆ' ” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು, “ಕೆಲವರು ಸ್ನಾನಿಕನಾದ ಯೋಹಾನನು, ಮತ್ತೆ ಕೆಲವರು ಎಲೀಯನು, ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಎನ್ನುತ್ತಾರೆ,” ಎಂದು ಹೇಳಿದರು.