Mark 8:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸು ಅವರಿಗೆ, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು. ಕೂಡಲೇ ಪೇತ್ರನು, “ನೀನು ಬರಬೇಕಾದ ಕ್ರಿಸ್ತನು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು.
Kannada BSI Bible 2016
ಅದಕ್ಕೆ ಆತನು ಅವರಿಗೆ -- ಆದರೆ ನಾನು ಯಾರೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ನೀನು ಕ್ರಿಸ್ತನೇ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರನ್ನು - ಆದರೆ ನೀವು ನನ್ನನ್ನು ಯಾರನ್ನುತ್ತೀರಿ? ಎಂದು ಕೇಳಲಾಗಿ ಪೇತ್ರನು - ನೀನು ಬರಬೇಕಾಗಿರುವ ಕ್ರಿಸ್ತನು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ” ಎಂದು ಉತ್ತರವಿತ್ತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಲು, ಪೇತ್ರನು ಯೇಸುವಿಗೆ, “ನೀನು ಕ್ರಿಸ್ತನೇ,” ಎಂದನು.