Mark 8:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಯೇಸು ತನ್ನ ಶಿಷ್ಯರಿಗೆ ಉಪದೇಶಿಸುತ್ತಾ “ಮನುಷ್ಯಕುಮಾರನು ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಿರಿಯ ಯೆಹೂದ್ಯನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಆತನನ್ನು ತಿರಸ್ಕರಿಸಿ ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬರುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.
Kannada BSI Bible 2016
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನು - ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತವಾಗಿ ಕೊಲ್ಲಲ್ಪಟ್ಟು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವದಕ್ಕೆ ಪ್ರಾರಂಭಮಾಡಿದನು.
Kannada Bible (KNCL) BSI 2016
ಈ ಘಟನೆಯ ಬಳಿಕ ಯೇಸುಸ್ವಾಮಿ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದು ತಮ್ಮ ಶಿಷ್ಯರಿಗೆ ಮುಚ್ಚುಮರೆಯಿಲ್ಲದೆ ಬೋಧಿಸಲಾರಂಭಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯಪುತ್ರನಾದ ನಾನು ಅನೇಕ ಬಾಧೆಗಳನ್ನು ಅನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ ಕೊಲೆಗೆ ಗುರಿಯಾಗಿ ಮೂರು ದಿವಸಗಳಾದ ಮೇಲೆ ಜೀವಂತವಾಗಿ ಎದ್ದು ಬರುವುದು ಅವಶ್ಯ ಎಂದು ಅವರಿಗೆ ಬೋಧಿಸಲಾರಂಭಿಸಿದರು.