Mark 8:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮುಂದೆ ಸಂಭವಿಸುವದೆಲ್ಲವನ್ನು ಯೇಸು ಅವರಿಗೆ ಹೇಳಿದನು. ಆತನು ಯಾವುದನ್ನೂ ರಹಸ್ಯವಾಗಿ ಇಡಲಿಲ್ಲ. ಪೇತ್ರನು ಯೇಸುವನ್ನು ಸ್ವಲ್ಪದೂರ ಕರೆದೊಯ್ದು, “ನೀನು ಹಾಗೆಲ್ಲಾ ಹೇಳಕೂಡದು” ಎಂದು ಪ್ರತಿಭಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು.
Kannada BSI Bible 2016
ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಈ ಮಾತನ್ನು ಏನೂ ಗುಂಬವಿಲ್ಲದೆ ಹೇಳಿದನು. ಆಗ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸುವದಕ್ಕೆ ಪ್ರಾರಂಭಿಸಲು
Kannada Bible (KNCL) BSI 2016
ಇದನ್ನು ಕೇಳಲಾಗದೇ ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು, “ತಾವು ಹೀಗೆಲ್ಲಾ ಹೇಳಬಾರದು,” ಎಂದು ಪ್ರತಿಭಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು ಯೇಸುವನ್ನು ಗದರಿಸಲಾರಂಭಿಸಿದನು.