Mark 8:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೇಸು ತನ್ನ ಶಿಷ್ಯರ ಕಡೆಗೆ ನೋಡಿ, ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ” ಎಂದು ಗದರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು.
Kannada BSI Bible 2016
ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಹಿಂತಿರುಗಿಕೊಂಡು ತನ್ನ ಶಿಷ್ಯರನ್ನು ನೋಡಿ ಪೇತ್ರನಿಗೆ - ಸೈತಾನನೇ, ನನ್ನ ಮುಂದೆ ನಿಲ್ಲಬೇಡ, ನಡೆ, ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ ಎಂದು ಗದರಿಸಿ ಹೇಳಿದನು.
Kannada Bible (KNCL) BSI 2016
ಆಗ ಯೇಸು ಹಿಂದಕ್ಕೆ ತಿರುಗಿ, ತಮ್ಮ ಶಿಷ್ಯರನ್ನು ನೋಡಿ, ಪೇತ್ರನನ್ನು ಗದರಿಸುತ್ತಾ, “ಸೈತಾನನೇ, ತೊಲಗು ಇಲ್ಲಿಂದ; ನಿನ್ನ ಈ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ತಿರುಗಿ ತಮ್ಮ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದು ಹೇಳಿದರು.