Mark 8:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೇಸು ಜನರನ್ನು ತನ್ನ ಬಳಿಗೆ ಕರೆದನು. ಆತನ ಶಿಷ್ಯರೂ ಅಲ್ಲಿದ್ದರು. ಯೇಸು ಅವರಿಗೆ, “ಯಾವನಿಗಾದರೂ ನನ್ನನ್ನು ಅನುಸರಿಸಲು ಮನಸ್ಸಿದ್ದರೆ, ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Kannada BSI Bible 2016
ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.
Kannada Bible (KNCL) BSI 2016
ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನರ ಗುಂಪನ್ನೂ ಒಟ್ಟಾಗಿ ತಮ್ಮ ಬಳಿಗೆ ಕರೆದು, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಜನರನ್ನೂ ಶಿಷ್ಯರನ್ನೂ ತಮ್ಮ ಬಳಿಗೆ ಕರೆದು ಅವರಿಗೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.