Mark 8:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲು ಇಚ್ಛಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ಹಾಗೂ ಸುವಾರ್ತೆಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ತನ್ನ ಪ್ರಾಣವನ್ನು ನಿರಂತರವಾಗಿ ಕಾಪಾಡಿಕೊಳ್ಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
Kannada BSI Bible 2016
ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿಯೂ ಸುವಾರ್ತೆಯ ನಿವಿುತ್ತವಾಗಿಯೂ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಉಳಿಸಿಕೊಳ್ಳುವನು.
Kannada Bible (KNCL) BSI 2016
ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವರು ಅದನ್ನು ಕಳೆದುಕೊಳ್ಳುವರು. ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವರೋ ಅವರು ಅದನ್ನು ಉಳಿಸಿಕೊಳ್ಳುವರು.