Mark 8:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಆ ಜನರಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಹೇಳಿದನು. ನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು, ದೇವರಿಗೆ ಸ್ತೋತ್ರಸಲ್ಲಿಸಿ ಅವುಗಳನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟು, ಅವುಗಳನ್ನು ಜನರಿಗೆ ಹಂಚಬೇಕೆಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.
Kannada BSI Bible 2016
ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ಜನರ ಗುಂಪಿಗೆ - ನೆಲದ ಮೇಲೆ ಕೂತುಕೊಳ್ಳಿರಿ ಎಂದು ಅಪ್ಪಣೆಕೊಟ್ಟು ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಹಂಚುವದಕ್ಕೆ ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.
Kannada Bible (KNCL) BSI 2016
ಯೇಸು ಜನರ ಗುಂಪಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಆಜ್ಞಾಪಿಸಿದರು. ಅನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಸಲ್ಲಿಸಿ, ಅವುಗಳನ್ನು ಮುರಿದು, ಜನರ ಗುಂಪಿಗೆ ಬಡಿಸಲು ಶಿಷ್ಯರಿಗೆ ಕೊಟ್ಟರು. ಅವರು ಬಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಜನಸಮೂಹವು ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ಮುರಿದು ಜನಸಮೂಹಕ್ಕೆ ಹಂಚಲು ತಮ್ಮ ಶಿಷ್ಯರಿಗೆ ಕೊಟ್ಟರು. ಅವರು ಜನಸಮೂಹಕ್ಕೆ ಹಂಚಿದರು.