Mark 9:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಯೇಸು ಜನರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ನಿಮ್ಮಲ್ಲಿ ಕೆಲವು ಜನರು ತಾವು ಸಾಯುವುದಕ್ಕೆ ಮುಂಚೆ ದೇವರ ರಾಜ್ಯವು ಅಧಿಕಾರದೊಡನೆ ಬರುವುದನ್ನು ನೋಡುತ್ತಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
Kannada BSI Bible 2016
ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅವರಿಗೆ - ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬಂದಿರುವದನ್ನು ನೋಡುವ ತನಕ ಮರಣ ಹೊಂದುವದಿಲ್ಲವೆಂದು ಹೇಳಿದನು.
Kannada Bible (KNCL) BSI 2016
ಪುನಃ ಯೇಸುಸ್ವಾಮಿ, ಅವರಿಗೆ “ಇಲ್ಲಿರುವವರಲ್ಲಿ ಕೆಲವರು ದೇವರ ಸಾಮ್ರಾಜ್ಯವು ಪ್ರಭಾವದೊಡನೆ ಜಗತ್ತಿನಲ್ಲಿ ಪ್ರತ್ಯಕ್ಷವಾಗುವುದನ್ನು ನೋಡದೆ ಮರಣಹೊಂದುವುದಿಲ್ಲ ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೇಸು ಅವರಿಗೆ, “ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಶಕ್ತಿಯೊಂದಿಗೆ ಬರುವುದನ್ನು ಕಾಣುವವರೆಗೆ ಮರಣದ ಅನುಭವ ಹೊಂದುವುದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.