Mark 9:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಆ ಶಿಷ್ಯರು ಈ ಸಂಗತಿಗಳನ್ನು ಯಾರಿಗೂ ತಿಳಿಸಲಿಲ್ಲ. ಆದರೆ “ಸತ್ತು ಜೀವಂತವಾಗಿ ಎದ್ದುಬರುವುದು” ಎಂದರೇನು? ಎಂದು ತಮ್ಮತಮ್ಮಲ್ಲಿಯೇ ಚರ್ಚಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Kannada BSI Bible 2016
ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಈ ಮಾತನ್ನು ಹಿಡಿದು ಸತ್ತುಜೀವಿತನಾಗಿ ಏಳುವದಂದರೇನು ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.
Kannada Bible (KNCL) BSI 2016
ಅಂತೆಯೇ ಶಿಷ್ಯರು ಇದನ್ನು ಯಾರಿಗೂ ಹೇಳಲಿಲ್ಲ; ಆದರೂ ‘ಸತ್ತು ಪುನರುತ್ಥಾನ ಹೊಂದುವುದು’ ಎಂದರೆ ಏನು? ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸತ್ತವರೊಳಗಿಂದ ಎದ್ದು ಬರುವುದೆಂದರೆ ಏನು?” ಅವರು ಒಬ್ಬರಿಗೊಬ್ಬರು ಆ ಮಾತನ್ನು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.