Mark 9:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವರಿಗೆ, “ಎಲೀಯನೇ ಮೊದಲು ಬರಬೇಕೆಂದು ಅವರು ಹೇಳುವುದು ಸರಿ. ಎಲೀಯನು ಎಲ್ಲವನ್ನು ಸರಿಪಡಿಸುತ್ತಾನೆ. ಆದರೆ ಮನುಷ್ಯಕುಮಾರನು ಬಹಳ ಸಂಕಟವನ್ನು ಅನುಭವಿಸುವನೆಂತಲೂ ಜನರು ಆತನನ್ನು ಹೀನೈಸುವರೆಂತಲೂ ಪವಿತ್ರಗ್ರಂಥವು ಏಕೆ ಹೇಳುತ್ತದೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?
Kannada BSI Bible 2016
ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ಎಲೀಯನು ಮೊದಲು ಬಂದು ಎಲ್ಲವನ್ನು ತಿರಿಗಿ ಸರಿಮಾಡುವದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ - ಅವನು ಬಹು ಕಷ್ಟಗಳನ್ನನುಭವಿಸಿ ಹೀನೈಸಲ್ಪಡಬೇಕೆಂಬದಾಗಿ ಬರೆದದೆ, ಇದು ಹೇಗೆ?
Kannada Bible (KNCL) BSI 2016
ಅದಕ್ಕೆ ಅವರು, “ ‘ಎಲೀಯನು ಮೊದಲು ಬಂದು ಎಲ್ಲವನ್ನೂ ಸಜ್ಜುಗೊಳಿಸುವನೆಂಬುದೇನೋ ನಿಜ. ಆದರೂ ನರಪುತ್ರನು ಜನರಿಂದ ತೀವ್ರಯಾತನೆಯನ್ನು ಅನುಭವಿಸಿ ಅವರಿಂದ ತಿರಸ್ಕೃತನಾಗಬೇಕು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆಯಲ್ಲವೆ; ಇದು ಹೇಗೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನೂ ಸರಿಪಡಿಸುತ್ತಾನೆಂಬ ಮಾತು ನಿಜವೇ. ಆದರೆ ಮನುಷ್ಯಪುತ್ರನಾದ ನಾನು ಬಹಳ ಯಾತನೆಗಳನ್ನು ಅನುಭವಿಸಿ ತಿರಸ್ಕರಿಸಲಾಗಬೇಕೆಂದು ನನ್ನ ವಿಷಯವಾಗಿ ಬರೆದಿರುವುದು ಹೇಗೆ?