Mark 9:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಯನು ಈಗಾಗಲೇ ಬಂದಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ ಮತ್ತು ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಕೇಡನ್ನು ಮಾಡಿದರು. ಅವನಿಗೆ ಹೀಗಾಗುವುದೆಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆದಿತ್ತು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು.
Kannada BSI Bible 2016
ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾನು ನಿಮಗೆ ಹೇಳುವದೇನಂದರೆ - ಎಲೀಯನು ಬಂದನು; ಮತ್ತು ಅವನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು ಅಂದನು.
Kannada Bible (KNCL) BSI 2016
ಆದರೆ ನಾನು ನಿಮಗೆ ಹೇಳುವುದೇನೆಂದರೆ, ‘ಎಲೀಯನು ಬಂದಾಗಿದೆ; ಆತನ ವಿಷಯವಾಗಿ ಮೊದಲೇ ಬರೆದಿರುವಂತೆ ಜನರು ತಮ್ಮ ಇಚ್ಛಾನುಸಾರ ಆತನನ್ನು ಹಿಂಸಿಸಿದ್ದೂ ಆಗಿದೆ’,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಜನರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.