Mark 9:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಇತರ ಶಿಷ್ಯರ ಬಳಿಗೆ ಹೋದರು. ಆ ಶಿಷ್ಯರ ಸುತ್ತಲೂ ಅನೇಕ ಜನರು ನೆರೆದಿದ್ದರು. ಧರ್ಮೋಪದೇಶಕರು ಅವರೊಡನೆ ವಾದ ಮಾಡುತ್ತಾ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.
Kannada BSI Bible 2016
ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರ ಸುತ್ತಲೂ ದೊಡ್ಡ ಸಮೂಹವನ್ನೂ ಶಾಸ್ತ್ರಿಗಳು ಅವರೊಂದಿಗೆ ತರ್ಕಿಸುತ್ತಿರುವದನ್ನೂ ಕಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವರು [ಉಳಿದ] ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವದನ್ನೂ ಕಂಡರು.
Kannada Bible (KNCL) BSI 2016
ಅವರೆಲ್ಲರೂ ಹಿಂದಿರುಗಿ ಬಂದಾಗ ಉಳಿದ ಶಿಷ್ಯರ ಸುತ್ತಲೂ ಜನರು ದೊಡ್ಡ ಗುಂಪಾಗಿ ನೆರೆದಿರುವುದನ್ನು ಧರ್ಮಶಾಸ್ತ್ರಿಗಳು ಇವರೊಡನೆ ವಾದಿಸುತ್ತಿರುವುದನ್ನು ಕಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಶಿಷ್ಯರ ಬಳಿಗೆ ಬಂದಾಗ, ಅವರ ಸುತ್ತಲು ದೊಡ್ಡ ಸಮೂಹವನ್ನೂ ನಿಯಮ ಬೋಧಕರು ಅವರೊಂದಿಗೆ ತರ್ಕಿಸುತ್ತಿರುವುದನ್ನೂ ಕಂಡರು.