Mark 9:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದೆವ್ವವು ಅವನ ಮೇಲೆ ಆಕ್ರಮಣ ಮಾಡಿದಾಗಲೆಲ್ಲಾ ಅವನನ್ನು ನೆಲಕ್ಕೆ ಕೆಡವುತ್ತದೆ. ನನ್ನ ಮಗನು ಬಾಯಿಂದ ನೊರೆ ಸುರಿಸುತ್ತಾ ಹಲ್ಲುಗಳನ್ನು ಕಟಕಟನೆ ಕಡಿಯುತ್ತಾನೆ ಮತ್ತು ಬಹಳ ಬಿರುಸಾಗುತ್ತಾನೆ. ಅವನನ್ನು ಆ ದೆವ್ವದಿಂದ ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಕೇಳಿಕೊಂಡೆನು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.
Kannada BSI Bible 2016
ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೊಂದು ಮೂಗದೆವ್ವ ಹಿಡಿದದೆ; ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ಕೆಡವುತ್ತದೆ; ಆಗ ಅವನು ನೊರೆ ಸುರಿಸುತ್ತಾ ಕರಕರನೆ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಹೇಳಿಕೊಂಡೆ; ಅವರ ಕೈಯಿಂದ ಆಗದೆಹೋಯಿತು ಎಂದು ಉತ್ತರ ಕೊಟ್ಟನು.
Kannada Bible (KNCL) BSI 2016
ಅವನಿಗೆ ಒಂದು ಮೂಕದೆವ್ವ ಹಿಡಿದಿದೆ. ಅವನ ಮೇಲೆ ಅದು ಬಂದಾಗಲೆಲ್ಲಾ ಅವನನ್ನು ನೆಲಕ್ಕೆ ಅಪ್ಪಳಿಸುತ್ತದೆ. ಅವನು ನೊರೆಕಾರುತ್ತಾ ಹಲ್ಲು ಕಡಿದುಕೊಳ್ಳುತ್ತಾನೆ. ಆಗ ಅವನ ದೇಹವೆಲ್ಲಾ ಮರಗಟ್ಟಿದಂತಾಗುತ್ತದೆ. ಆ ದೆವ್ವವನ್ನು ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಕೇಳಿಕೊಂಡೆ. ಆದರೆ, ಅದು ಅವರಿಂದಾಗಲಿಲ್ಲ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ,” ಎಂದು ಹೇಳಿದನು.