Mark 9:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ವಿಶ್ವಾಸವಿಲ್ಲದ ಸಂತಾನವೇ, ನಾನು ನಿಮ್ಮೊಡನೆ ಇನ್ನೆಷ್ಟು ಕಾಲ ಇರಲಿ? ಇನ್ನೆಷ್ಟು ಕಾಲ ಸಹಿಸಿಕೊಳ್ಳಲಿ? ಆ ಹುಡುಗನನ್ನು ನನ್ನ ಬಳಿಗೆ ತನ್ನಿರಿ!” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.
Kannada BSI Bible 2016
ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕಾತನು - ಎಲಾ, ನಂಬಿಕೆಯಿಲ್ಲದಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಅನ್ನಲು
Kannada Bible (KNCL) BSI 2016
ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.