Mark 9:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆರು ದಿನಗಳ ನಂತರ ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಯೇಸು ಎತ್ತರವಾದ ಬೆಟ್ಟದ ಮೇಲೆ ಹೋದನು. ಅಲ್ಲಿ ಅವರು ಮಾತ್ರ ಇದ್ದರು. ಈ ಶಿಷ್ಯರು ಯೇಸುವನ್ನು ನೋಡುತ್ತಿರಲು, ಇದ್ದಕ್ಕಿದ್ದಂತೆ ಆತನು ರೂಪಾಂತರ ಹೊಂದಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.
Kannada BSI Bible 2016
ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರು ದಿವಸಗಳಾದ ಮೇಲೆ ಯೇಸು ಪೇತ್ರ ಯಾಕೋಬ ಯೋಹಾನರನ್ನು ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು.
Kannada Bible (KNCL) BSI 2016
ಆರು ದಿನಗಳ ಬಳಿಕ ಪೇತ್ರ, ಯಕೋಬ ಮತ್ತು ಯೊವಾನ್ನ ಇವರನ್ನು ಮಾತ್ರ ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಯೇಸು ರೂಪಾಂತರ ಹೊಂದಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಯೋಹಾನನನ್ನೂ ತಮ್ಮೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದರು. ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು.