Mark 9:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಶಿಷ್ಯರು ಆ ಹುಡುಗನನ್ನು ಯೇಸುವಿನ ಬಳಿಗೆ ತಂದರು. ಆ ದೆವ್ವವು ಯೇಸುವನ್ನು ನೋಡಿದ ಕೂಡಲೇ ಆ ಹುಡುಗನ ಮೇಲೆ ಆಕ್ರಮಣ ಮಾಡಿತು. ಆ ಹುಡುಗನು ಕೆಳಗೆ ಬಿದ್ದು, ಬಾಯಿಂದ ನೊರೆಯನ್ನು ಸುರಿಸುತ್ತಾ ಒದ್ದಾಡತೊಡಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.
Kannada BSI Bible 2016
ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಆತನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಅವನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
Kannada Bible (KNCL) BSI 2016
ಆಗ ಆ ಹುಡುಗನನ್ನು ಯೇಸುವಿನ ಬಳಿಗೆ ಕರೆತಂದರು. ಯೇಸುವನ್ನು ನೋಡಿದಾಕ್ಷಣ ಆ ದೆವ್ವ ಹುಡುಗನನ್ನು ನೆಲಕ್ಕೆ ಅಪ್ಪಳಿಸಿ ಒದ್ದಾಡಿಸಿತು. ಹುಡುಗ ಹೊರಳಾಡುತ್ತಾ ನೊರೆಕಾರಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು.