Mark 9:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಯೇಸು, “‘ನಿನಗೆ ಸಾಧ್ಯವಿರುವುದಾದರೆ’ ಎಂದು ನೀನು ಹೇಳುವುದೇಕೆ? ನಂಬಿಕೆಯಿಡುವ ವ್ಯಕ್ತಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.
Kannada BSI Bible 2016
ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನಿಗೆ - ನಿನ್ನ ಕೈಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ? ನಂಬುವವನಿಗೆ ಎಲ್ಲಾ ಆಗುವದು ಎಂದು ಹೇಳಿದನು.
Kannada Bible (KNCL) BSI 2016
ಅದಕ್ಕೆ ಯೇಸು, “ ‘ಸಾಧ್ಯವಾದರೆ’ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.