Mark 9:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ, “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.
Kannada BSI Bible 2016
ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ಜನರ ಗುಂಪು ಓಡಿಬರುವದನ್ನು ಕಂಡು ಆ ದೆವ್ವವನ್ನು ಗದರಿಸಿ - ಎಲೇ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟುಹೋಗು; ಇನ್ನು ಮುಂದೆ ಹಿಡಿಯಬೇಡವೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ ಅಂದನು.
Kannada Bible (KNCL) BSI 2016
ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, “ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.