Mark 9:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ದೆವ್ವವು ಅರಚಿತು. ಅದು ಆ ಹುಡುಗನನ್ನು ಮತ್ತೆ ನೆಲದ ಮೇಲೆ ಬೀಳಿಸಿ, ಒದ್ದಾಡಿಸಿ ಹೊರಬಂದಿತು. ಆ ಹುಡುಗನು ಸತ್ತವನಂತೆ ಬಿದ್ದಿದ್ದನು. ಅನೇಕ ಜನರು, “ಅವನು ಸತ್ತುಹೋದನು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.
Kannada BSI Bible 2016
ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅದು ಅಬ್ಬರಿಸಿ ಅವನನ್ನು ಒದ್ದಾಡಿಸಿ ಬಿಟ್ಟು ಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು - ಸತ್ತುಹೋದ ಅಂದರು.
Kannada Bible (KNCL) BSI 2016
ದೆವ್ವವು ಚೀರುತ್ತಾ, ಹುಡುಗನನ್ನು ವಿಲವಿಲನೆ ಒದ್ದಾಡಿಸಿ, ಕೊನೆಗೆ ಬಿಟ್ಟುಹೋಯಿತು. ಹುಡುಗನು ಶವದಂತಾದನು. ಅಲ್ಲಿದ್ದವರಲ್ಲಿ ಅನೇಕರು ‘ಹುಡುಗ ಸತ್ತುಹೋದ,’ ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, “ಅವನು ಸತ್ತಿದ್ದಾನೆ,” ಎಂದರು.