Mark 9:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಮನೆಯೊಳಗೆ ಹೋದ ಮೇಲೆ ಆತನ ಶಿಷ್ಯರು ಪ್ರತ್ಯೇಕವಾದ ಸ್ಥಳದಲ್ಲಿ ಆತನಿಗೆ, “ಆ ದೆವ್ವವನ್ನು ಬಿಡಿಸಲು ನಮಗೆ ಏಕೆ ಸಾಧ್ಯವಾಗಲಿಲ್ಲ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.
Kannada BSI Bible 2016
ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿ--ಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಮನೆಗೆ ಬಂದಾಗ ಆತನ ಶಿಷ್ಯರು - ಅದನ್ನು ಬಿಡಿಸಲಿಕ್ಕೆ ನವ್ಮಿುಂದ ಯಾಕೆ ಆಗಲಿಲ್ಲವೆಂದು ಆತನನ್ನು ಏಕಾಂತದಲ್ಲಿ ಕೇಳಲು
Kannada Bible (KNCL) BSI 2016
ಅಂದು ಯೇಸುಸ್ವಾಮಿ ಮನೆಗೆ ಬಂದಾಗ, ಶಿಷ್ಯರು ಪ್ರತ್ಯೇಕವಾಗಿ ಅವರ ಬಳಿಗೆ ಬಂದು, “ಆ ದೆವ್ವವನ್ನು ಹೊರಗಟ್ಟಲು ನಮ್ಮಿಂದೇಕೆ ಆಗಲಿಲ್ಲ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.