Mark 9:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೇಸು ಮತ್ತು ಆತನ ಶಿಷ್ಯರು ಆ ಸ್ಥಳದಿಂದ ಹೊರಟು ಗಲಿಲಾಯದ ಮೂಲಕ ಪ್ರಯಾಣ ಮಾಡಿದರು. ತಾವು ಎಲ್ಲಿದ್ದೇವೆಂಬುದು ಜನರಿಗೆ ತಿಳಿಯಬಾರದೆಂಬುದು ಯೇಸುವಿನ ಉದ್ದೇಶವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.
Kannada BSI Bible 2016
ಅವರು ಅಲ್ಲಿಂದ ಹೊರಟು ಗಲಿಲಾಯವನ್ನು ಹಾದುಹೋಗುತ್ತಿದ್ದರು. ಇದು ಯಾರಿಗೂ ತಿಳಿಯಬಾರದೆಂದು ಆತನಿಗೆ ಮನಸ್ಸಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಇದು ಜನರಿಗೆ ಗೊತ್ತಾಗಬಾರದೆಂದು ಆತನಿಗೆ ಮನಸ್ಸಿತ್ತು.
Kannada Bible (KNCL) BSI 2016
ಯೇಸುಸ್ವಾಮಿ ಮತ್ತು ಶಿಷ್ಯರು ಹೊರಟು ಗಲಿಲೇಯ ಮಾರ್ಗವಾಗಿ ಮುಂದಕ್ಕೆ ಪ್ರಯಾಣ ಮಾಡಿದರು. ಇದು ಯಾರಿಗೂ ತಿಳಿಯಬಾರದು ಎಂಬುದು ಯೇಸುವಿನ ಇಚ್ಛೆಯಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅಲ್ಲಿಂದ ಹೊರಟು ಗಲಿಲಾಯದ ಮಾರ್ಗವಾಗಿ ಹಾದುಹೋದರು. ತಾವು ಎಲ್ಲಿದ್ದೇವೆ ಎಂಬುದು ಬೇರೆಯವರಿಗೆ ತಿಳಿಯಬಾರದೆಂದು ಯೇಸು ಅಪೇಕ್ಷಿಸಿದರು.