Mark 9:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಕೆಂದರೆ ಆತನು ತನ್ನ ಶಿಷ್ಯರಿಗೆ ಏಕಾಂತವಾಗಿ ಉಪದೇಶಿಸಬೇಕೆಂದಿದ್ದನು. ಯೇಸು ಅವರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಕೊಡುವರು. ಜನರು ಆತನನ್ನು ಕೊಲ್ಲುವರು. ಕೊಲ್ಲಲ್ಪಟ್ಟ ಮೂರನೆಯ ದಿನದಲ್ಲಿ ಆತನು ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.
Kannada BSI Bible 2016
ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ - ಮನುಷ್ಯಕುಮಾರನು ಜನರ ಕೈಗೆ ಒಪ್ಪಿಸಲ್ಪಡುತ್ತಾನೆ; ಅವರು ಅವನನ್ನು ಕೊಲ್ಲುವರು; ಕೊಂದ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು ಹೇಳಿದನು.
Kannada Bible (KNCL) BSI 2016
ಕಾರಣ, ತಮ್ಮ ಶಿಷ್ಯರಿಗೆ ಪ್ರಬೋಧಿಸುವುದರಲ್ಲಿ ಅವರು ನಿರತರಾಗಿದ್ದರು. “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು. ಅವರು ಆತನನ್ನು ಕೊಲ್ಲುವರು. ಕೊಂದ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಯೇಸು ಅವರಿಗೆ ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು. ಅವರು ನನ್ನನ್ನು ಕೊಲ್ಲುವರು. ನನ್ನನ್ನು ಕೊಂದ ತರುವಾಯ ಮೂರನೆಯ ದಿನದಲ್ಲಿ ನಾನು ಜೀವಂತವಾಗಿ ಏಳುವೆನು,” ಎಂದು ಬೋಧಿಸುತ್ತಿದ್ದರು.