Mark 9:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಅವರು ಒಂದು ಮನೆಯೊಳಗಿದ್ದಾಗ ಆತನು ತನ್ನ ಶಿಷ್ಯರಿಗೆ, “ಈ ದಿನ ನೀವು ದಾರಿಯಲ್ಲಿ ವಾದಮಾಡುತ್ತಿದ್ದುದ್ದನ್ನು ಕೇಳಿಸಿಕೊಂಡೆ. ನೀವು ಯಾವುದರ ಬಗ್ಗೆ ವಾದಮಾಡುತ್ತಿದ್ದಿರಿ?” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.
Kannada BSI Bible 2016
ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅವರು ಕಪೆರ್ನೌವಿುಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ - ನೀವು ದಾರಿಯಲ್ಲಿ ಏನು ಮಾತಾಡಿಕೊಳ್ಳುತ್ತಿದ್ದಿರಿ ಎಂದು ಶಿಷ್ಯರನ್ನು ಕೇಳಲು ಅವರು ಸುಮ್ಮನಿದ್ದರು;
Kannada Bible (KNCL) BSI 2016
ಅನಂತರ ಅವರೆಲ್ಲರೂ ಕಫೆರ್ನವುಮಿಗೆ ಬಂದರು. ಮನೆ ಸೇರಿದಾಗ ಯೇಸುಸ್ವಾಮಿ, “ದಾರಿಯಲ್ಲಿ ಬರುತ್ತಾ ನೀವು ನಿಮ್ಮಲ್ಲೇ ಏನು ಚರ್ಚೆಮಾಡುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದರು. ಅವರು ಮೌನತಾಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ, ಯೇಸು ಅವರಿಗೆ, “ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ?” ಎಂದು ಕೇಳಿದರು.