Mark 9:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಕುಳಿತುಕೊಂಡು, ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು ಅವರಿಗೆ, “ನಿಮ್ಮಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಬೇಕೆಂದು ಬಯಸುವವನು ಉಳಿದ ಎಲ್ಲರನ್ನು ತನಗಿಂತಲೂ ಹೆಚ್ಚು ಪ್ರಮುಖರೆಂದು ಭಾವಿಸಿಕೊಂಡು ಎಲ್ಲರ ಸೇವೆಮಾಡಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,
Kannada BSI Bible 2016
ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಕೂತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ - ಯಾವನಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಆಳೂ ಆಗಿರಬೇಕು ಎಂದು ಹೇಳಿ
Kannada Bible (KNCL) BSI 2016
ಯೇಸು ಕುಳಿತುಕೊಂಡು, ಹನ್ನೆರಡು ಮಂದಿಯನ್ನೂ ಕರೆದು, ಅವರಿಗೆ, ‘ನಿಮ್ಮಲ್ಲಿ ಮೊದಲಿಗನಾಗ ಬಯಸುವವನು ಎಲ್ಲರಿಗೂ ಕಡೆಯವನಾಗಿರಲಿ; ಎಲ್ಲರ ಸೇವೆ ಮಾಡುವವನಾಗಿ ಇರಲಿ,’ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಕುಳಿತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ, “ಯಾವನಾದರೂ ಮೊದಲಿನವನಾಗಬೇಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು,” ಎಂದರು.