Mark 9:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೋಹಾನನು, “ಗುರುವೇ, ಯಾರೋ ಒಬ್ಬನು ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುತ್ತಿರುವುದನ್ನು ನಾವು ನೋಡಿದೆವು. ಅವನು ನಮ್ಮವನಲ್ಲ. ಆದ್ದರಿಂದ ನಿನ್ನ ಹೆಸರನ್ನು ಹೇಳಕೂಡದೆಂದು ಅವನಿಗೆ ಹೇಳಿದೆವು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.
Kannada BSI Bible 2016
ಯೋಹಾನನು ಆತನಿಗೆ -- ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಹಾನನು ಆತನಿಗೆ - ಬೋಧಕನೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಲಾಗಿ ಯೇಸು -
Kannada Bible (KNCL) BSI 2016
ಯೊವಾನ್ನನು ಯೇಸುಸ್ವಾಮಿಗೆ, “ಗುರುವೇ, ಯಾರೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲ. ಆದಕಾರಣ ಅವನನ್ನು ತಡೆದೆವು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಹಾನನು, “ಬೋಧಕರೇ, ನಮ್ಮನ್ನು ಹಿಂಬಾಲಿಸದ ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವ ಓಡಿಸುವುದನ್ನು ನಾವು ಕಂಡೆವು. ಅವನು ನಮ್ಮವನು ಅಲ್ಲದ್ದರಿಂದ ನಾವು ಅವನನ್ನು ತಡೆದೆವು,” ಎಂದು ಹೇಳಿದನು.