Mark 9:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವರಿಗೆ, “ಅವನನ್ನು ತಡೆಯಬೇಡಿ. ನನ್ನ ಹೆಸರಿನ ಮೂಲಕ ಅದ್ಭುತಕಾರ್ಯಗಳನ್ನು ಮಾಡುವವನು ಆ ಕೂಡಲೇ ನನ್ನ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳಲು ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.
Kannada BSI Bible 2016
ಆದರೆ ಯೇಸು--ಅವನಿಗೆ ಅಡ್ಡಿಮಾಡಬೇಡಿರಿ; ಯಾಕಂದರೆ ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿ ನನ್ನ ವಿಷಯದಲ್ಲಿ ಹಗುರಾಗಿ ಕೆಟ್ಟದ್ದನ್ನು ಮಾತನಾಡುವ ಒಬ್ಬನಾದರೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನ ಮೇಲೆ ಮಹತ್ತನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.
Kannada Bible (KNCL) BSI 2016
ಅದಕ್ಕೆ ಯೇಸು, “ಅವನನ್ನು ತಡೆಯಬೇಡಿ, ನನ್ನ ಹೆಸರಿನಲ್ಲಿ ಅದ್ಭುತ ಮಾಡುವವನು ಮರುಕ್ಷಣವೇ ನನ್ನ ವಿಷಯವಾಗಿ ಅಪಪ್ರಚಾರ ಮಾಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ; ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿದವನು, ನನ್ನ ವಿಷಯದಲ್ಲಿ ಕೆಟ್ಟದ್ದನ್ನು ಮಾತನಾಡಲಾರನು.