Mark 9:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
Kannada BSI Bible 2016
ಇದಲ್ಲದೆ ನೀವು ಕ್ರಿಸ್ತನಿಗೆ ಸೇರಿದವ ರಾದದರಿಂದ ಯಾವನಾದರೂ ನನ್ನ ಹೆಸರಿನಲ್ಲಿ ನಿಮಗೆ ಒಂದು ತಂಬಿಗೆ ನೀರನ್ನು ಕೊಟ್ಟರೆ ಅವನು ತನ್ನ ಪ್ರತಿ ಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕ್ರಿಸ್ತನವರೆಂದು ನಿಮಗೆ ಯಾವನಾದರೂ ಒಂದು ತಂಬಿಗೆ ನೀರನ್ನು ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada Bible (KNCL) BSI 2016
ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನೀವು ಕ್ರಿಸ್ತನಲ್ಲಿ ಸೇರಿದವರಾದ್ದರಿಂದ ಯಾರಾದರೂ ನನ್ನ ಹೆಸರಿನಲ್ಲೆ ನಿಮಗೆ ಒಂದು ಲೋಟ ನೀರನ್ನು ಕೊಟ್ಟರೂ ಅವರು ತಮ್ಮ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.