Mark 9:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನನ್ನಲ್ಲಿ ನಂಬಿಕೆಯಿಟ್ಟಿರುವ ಈ ಚಿಕ್ಕ ಮಕ್ಕಳಲ್ಲಿ ಒಬ್ಬನನ್ನು ಪಾಪಕ್ಕೆ ನಡೆಸುವ ವ್ಯಕ್ತಿಯು ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಸಮುದ್ರದಲ್ಲಿ ಮುಳುಗುವುದೇ ಒಳ್ಳೆಯದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.
Kannada BSI Bible 2016
ನನ್ನನ್ನು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಸಮುದ್ರದಲ್ಲಿ ಹಾಕಿದರೂ ಅವನಿಗೆ ಲೇಸು.
Kannada Bible (KNCL) BSI 2016
ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ನನ್ನಲ್ಲಿ ವಿಶ್ವಾಸ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ದೊಡ್ಡ ಬೀಸುಕಲ್ಲನ್ನು ಕಟ್ಟಿ, ಅವನನ್ನು ಸಮುದ್ರದಲ್ಲಿ ದಬ್ಬುವುದೇ ಅವನಿಗೆ ಲೇಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವರಿಗೆ ಲೇಸು.