Mark 9:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ ಅದನ್ನು ಕತ್ತರಿಸಿಬಿಡು. ಎರಡು ಕೈಗಳನ್ನು ಇಟ್ಟುಕೊಂಡು, ನಂದಿಹೋಗದ ಬೆಂಕಿಯಿರುವ ನರಕಕ್ಕೆ ಹೋಗುವುದಕ್ಕಿಂತ ಅಂಗವಿಕಲನಾಗಿದ್ದು ನಿತ್ಯಜೀವವನ್ನು ಪಡೆಯುವುದೇ ಮೇಲು. ಆ ಸ್ಥಳದಲ್ಲಿ ಬೆಂಕಿ ಆರಿಹೋಗುವುದೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
Kannada BSI Bible 2016
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿದ್ದು ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವದಕ್ಕಿಂತ ಕೈಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.
Kannada Bible (KNCL) BSI 2016
ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಕೈ ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಎಂದಿಗೂ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅಂಗಹೀನರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು.