Mark 9:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಕಾಲು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ, ಅದನ್ನು ಕತ್ತರಿಸಿಬಿಡು. ಎರಡು ಕಾಲುಗಳನ್ನು ಇಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಕುಂಟನಾಗಿರುವುದೇ ಮೇಲು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
Kannada BSI Bible 2016
ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನಿನ್ನ ಕಾಲು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿದ್ದು ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಕಾಲುಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.
Kannada Bible (KNCL) BSI 2016
ನಿನ್ನ ಕಾಲು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಕಾಲು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ನೀವು ಎರಡು ಕಾಲುಳ್ಳವರಾಗಿ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು.