Mark 9:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ನಾವು ಇಲ್ಲಿ ಮೂರು ಗುಡಾರಗಳನ್ನು ಹಾಕುತ್ತೇವೆ. ಒಂದು ನಿನಗೆ, ಒಂದು ಮೋಶೆಗೆ ಮತ್ತೊಂದು ಎಲೀಯನಿಗೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
Kannada BSI Bible 2016
ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪೇತ್ರನು ಯೇಸುವಿಗೆ - ಗುರುವೇ, ನಾವು ಇಲ್ಲೇ ಇರುವದು ಒಳ್ಳೇದು; ಮೂರು ಪರ್ಣಶಾಲೆಗಳನ್ನು ಕಟ್ಟುವೆವು; ನಿನಗೊಂದು ಮೋಶೆಗೊಂದು ಎಲೀಯನಿಗೊಂದು ಎಂದು ಹೇಳಿದನು.
Kannada Bible (KNCL) BSI 2016
ಆಗ ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು; ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ನಾವು ಕಟ್ಟುವೆವು,” ಎಂದು ಹೇಳಿದನು.