Mark 9:50 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”
Kannada BSI Bible 2016
ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪೆಯಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.
Kannada Bible (KNCL) BSI 2016
ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪೆಯಾದರೆ, ಇನ್ನು ಯಾವುದರಿಂದ ಅದನ್ನು ಪುನಃ ರುಚಿಗೊಳಿಸಲಾದೀತು? ನೀವು ಉಪ್ಪಿನಂತೆ ಒಬ್ಬರಿಗೊಬ್ಬರು ಒಪ್ಪಿಗೆಯಾಗಿ ಸಮಾಧಾನದಿಂದಿರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಉಪ್ಪು ಒಳ್ಳೆಯದು. ಆದರೆ ಉಪ್ಪೇ ಸಪ್ಪಗಾದರೆ, ಇನ್ನಾವುದರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರುವಂತೆ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ,” ಎಂದರು.