Matthew 1:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಹಾಮನಿಂದಿಡಿದು ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು. ದಾವೀದನಿಂದಿಡಿದು ಬಾಬಿಲೋನಿಗೆ ಸೆರೆಯೊಯ್ದ ಸಮಯದವರೆಗೆ ಹದಿನಾಲ್ಕು ತಲೆಮಾರುಗಳು. ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದಂದಿನಿಂದ ಕ್ರಿಸ್ತನು ಹುಟ್ಟುವವರೆಗೆ ಹದಿನಾಲ್ಕು ತಲೆಮಾರುಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು.
Kannada BSI Bible 2016
ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಅಬ್ರಹಾಮನಿಂದ ದಾವೀದನವರೆಗೂ ಒಟ್ಟು ಹದಿನಾಲ್ಕು ತಲೆಗಳು. ದಾವೀದ ಮೊದಲುಗೊಂಡು ಬಾಬೆಲಿಗೆ ಸೆರೆಹೋಗುವವರೆಗೂ ಹದಿನಾಲ್ಕು ತಲೆಗಳು. ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನವರೆಗೂ ಹದಿನಾಲ್ಕು ತಲೆಗಳು.
Kannada Bible (KNCL) BSI 2016
ಹೀಗೆ ಒಟ್ಟು, ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು, ದಾವೀದನಿಂದ ಬಾಬಿಲೋನಿನ ದಾಸ್ಯದಿನಗಳವರೆಗೆ ಹದಿನಾಲ್ಕು, ಬಾಬಿಲೋನಿನ ದಾಸ್ಯದಿನಗಳಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ರೀತಿಯಲ್ಲಿ ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿಗೆ ಸೆರೆ ಹೋಗುವವರೆಗೆ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿಗೆ ಸೆರೆಹೋದ ದಿನದಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.