Matthew 1:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಕ್ರಿಸ್ತನ ತಾಯಿ ಮರಿಯಳು. ಯೇಸುವಿನ ಜನನ ಈ ರೀತಿ ಸಂಭವಿಸಿತು: ಮದುವೆಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದುಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.
Kannada BSI Bible 2016
ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ - ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯಮಾಡಿರಲಾಗಿ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಬಸುರಾಗಿದ್ದದ್ದು ತಿಳಿದುಬಂತು.
Kannada Bible (KNCL) BSI 2016
ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು.