Matthew 1:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.
Kannada BSI Bible 2016
ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆಕೆಯ ಗಂಡನಾದ ಯೋಸೇಫನು ಸಜ್ಜನನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ, ಯಾರಿಗೂ ತಿಳಿಯದಂತೆ ಆಕೆಯನ್ನು ಬಿಟ್ಟುಬಿಡಬೇಕೆಂದಿದ್ದನು.
Kannada Bible (KNCL) BSI 2016
ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.