Matthew 1:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.
Kannada BSI Bible 2016
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು.
Kannada Bible (KNCL) BSI 2016
ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು ’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.