Matthew 1:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
Kannada BSI Bible 2016
ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್‌ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.
Kannada Bible (KNCL) BSI 2016
“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.