Matthew 1:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು ಎಚ್ಚರಗೊಂಡ ಮೇಲೆ ಪ್ರಭುವಿನ ದೂತನು ಕನಸಿನಲ್ಲಿ ಹೇಳಿದ್ದಂತೆಯೇ ಮರಿಯಳನ್ನು ಪತ್ನಿಯನ್ನಾಗಿ ಸ್ವೀಕರಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.
Kannada BSI Bible 2016
ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು;ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೋಸೇಫನು ನಿದ್ದೆ ತಿಳಿದೆದ್ದು ಕರ್ತನ ದೂತನು ಅಪ್ಪಣೆಕೊಟ್ಟ ಹಾಗೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು.
Kannada Bible (KNCL) BSI 2016
ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹಮಾಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ನಿದ್ದೆಯಿಂದ ಎದ್ದ ಮೇಲೆ, ಕರ್ತನ ದೂತನು ಆಜ್ಞಾಪಿಸಿದಂತೆ ಮರಿಯಳನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.