Matthew 1:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಮರಿಯಳು ಮಗನನ್ನು ಹೆರುವ ತನಕ ಯೋಸೇಫನು ಅವಳೊಂದಿಗೆ ಶರೀರ ಸಂಬಂಧವಿಲ್ಲದೆ ಇದ್ದನು. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.
Kannada BSI Bible 2016
ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆಕೆಯು ಗಂಡುಮಗನನ್ನು ಹಡೆಯುವ ತನಕ ಆಕೆಯನ್ನು ಅರಿಯಲಿಲ್ಲ. ಮಗುವಿಗೆ ಯೇಸುವೆಂದು ಹೆಸರಿಟ್ಟನು.
Kannada Bible (KNCL) BSI 2016
ಆದರೆ ಆಕೆಯೊಡನೆ ಲೈಂಗಿಕ ಸಂಬಂಧವಿಲ್ಲದೆ ಇದ್ದನು. ಆಕೆ ಗಂಡುಮಗುವಿಗೆ ಜನ್ಮವಿತ್ತಳು. ಜೋಸೆಫನು ಆ ಮಗುವಿಗೆ ‘ಯೇಸು’ ಎಂದು ನಾಮಕರಣ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.