Matthew 10:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
Kannada BSI Bible 2016
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತರಕ್ಕೆ ಕರೆದು ದೆವ್ವಗಳನ್ನು ಬಿಡಿಸುವದಕ್ಕೂ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುವದಕ್ಕೂ ಅವರಿಗೆ ಅಧಿಕಾರಕೊಟ್ಟನು.
Kannada Bible (KNCL) BSI 2016
ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ಅಶುದ್ಧಾತ್ಮಗಳನ್ನು ಓಡಿಸುವುದಕ್ಕೂ ಎಲ್ಲಾ ತರವಾದ ವ್ಯಾಧಿಯನ್ನೂ ರೋಗವನ್ನೂ ಸ್ವಸ್ಥಮಾಡುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.