Matthew 10:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ಯಾವುದೇ ಊರಿನೊಳಕ್ಕೆ ಅಥವಾ ನಗರಕ್ಕೆ ಪ್ರವೇಶಿಸಿದಾಗ ಅಲ್ಲಿರುವ ಉತ್ತಮ ವ್ಯಕ್ತಿಯನ್ನು ಗುರುತಿಸಿ, ನೀವು ಆ ಊರನ್ನು ಬಿಡುವ ತನಕ ಅವನ ಮನೆಯಲ್ಲೇ ತಂಗಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.
Kannada BSI Bible 2016
ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಯಾವದೊಂದು ಊರಿಗೆ ಅಥವಾ ಹಳ್ಳಿಗೆ ಸೇರಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅವರಲ್ಲೇ ಇರ್ರಿ.
Kannada Bible (KNCL) BSI 2016
“ನೀವು ಒಂದು ಪಟ್ಟಣಕ್ಕಾಗಲಿ, ಹಳ್ಳಿಗಾಗಲಿ ಹೋದಾಗ, ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕಂಡುಹಿಡಿಯಿರಿ. ಅಲ್ಲಿಂದ ಮುಂದಕ್ಕೆ ಸಾಗುವವರೆಗೂ ಅವನಲ್ಲೇ ತಂಗಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಯಾವುದಾದರೂ ಒಂದು ಪಟ್ಟಣವನ್ನು, ಇಲ್ಲವೆ ಹಳ್ಳಿಯನ್ನು ಪ್ರವೇಶಿಸುವಾಗ, ಅದರಲ್ಲಿ ಯೋಗ್ಯ ವ್ಯಕ್ತಿ ಯಾರೆಂದು ವಿಚಾರಿಸಿರಿ, ಅಲ್ಲಿಂದ ಹೊರಡುವವರೆಗೆ ಅಲ್ಲಿಯೇ ತಂಗಿರಿ.