Matthew 10:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮನೆಯಲ್ಲಿರುವ ಜನರು ನಿಮ್ಮನ್ನು ಸ್ವಾಗತಿಸಿದರೆ ನಿಮ್ಮ ಆಶೀರ್ವಾದಕ್ಕೆ ಅವರು ಯೋಗ್ಯರಾಗಿರುವುದರಿಂದ ಆ ಆಶೀರ್ವಾದವು ಅವರಿಗೆ ದೊರೆಯಲಿ. ಅವರು ನಿಮ್ಮನ್ನು ಸ್ವಾಗತಿಸದಿದ್ದರೆ, ನಿಮ್ಮ ಆಶೀರ್ವಾದವು ನಿಮಗೇ ಹಿಂತಿರುಗಿಬರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ.
Kannada BSI Bible 2016
ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಆಶೀರ್ವಾದವು ಅವರಿಗೆ ಆಗಲಿ; ಅಯೋಗ್ಯರಾಗಿದ್ದರೆ ನಿಮ್ಮ ಆಶೀರ್ವಾದವು ನಿಮಗೆ ಹಿಂದಕ್ಕೆ ಬರಲಿ.
Kannada Bible (KNCL) BSI 2016
ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮನೆಯು ಅಯೋಗ್ಯವಾಗಿದ್ದರೆ, ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.