Matthew 10:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನ್ಯಾಯವಿಚಾರಣೆಯ ದಿನದಲ್ಲಿ ಈ ಊರಿನ ಗತಿಯು ಸೊದೋಮ್ ಮತ್ತು ಗೊಮೋರಗಳಿಗಿಂತ ಬಹಳ ಕೆಟ್ಟದ್ದಾಗಿರುವುದು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada BSI Bible 2016
ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್‌ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನ್ಯಾಯವಿಚಾರಣೆಯ ದಿವಸದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada Bible (KNCL) BSI 2016
ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನ್ಯಾಯತೀರ್ಪಿನ ದಿನದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಗತಿಯು ಆ ಪಟ್ಟಣಕ್ಕಿಂತ ಹೆಚ್ಚು ತಾಳುವಂಥದ್ದಾಗಿರುವುದು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.