Matthew 10:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.
Kannada BSI Bible 2016
ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದಕ್ಕೂ ಅರಸುಗಳ ಮುಂದಕ್ಕೂ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
Kannada Bible (KNCL) BSI 2016
ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ.