Matthew 10:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada BSI Bible 2016
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳ ಸಂಚಾರವನ್ನು ತೀರಿಸಿರುವದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada Bible (KNCL) BSI 2016
ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.