Matthew 10:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?
Kannada BSI Bible 2016
ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಗುರುವಿನಂತೆ ಆಗುವದು ಶಿಷ್ಯನಿಗೆ ಸಾಕು, ಧಣಿಯಂತೆ ಆಗುವದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟ ಮೇಲೆ ಆತನ ಮನೆಯವರನ್ನು ಏನಂದಾರು? ಆದರೂ ಅವರಿಗೆ ಹೆದರಬೇಡಿರಿ.
Kannada Bible (KNCL) BSI 2016
ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಷ್ಯನು ತನ್ನ ಗುರುವಿನಂತೆಯೂ ದಾಸನು ತನ್ನ ಯಜಮಾನನಂತೆಯೂ ಇದ್ದರೆ ಸಾಕು. ಮನೆಯ ಯಜಮಾನನನ್ನೇ ಅವರು, ‘ಬೆಲ್ಜೆಬೂಲನು’ ಎಂದು ಕರೆದರೆ, ಯಜಮಾನನ ಮನೆಯವರನ್ನು ಇನ್ನೂ ಎಷ್ಟೋ ಕೆಟ್ಟದ್ದಾಗಿ ಕರೆಯುವರಲ್ಲವೇ!