Matthew 10:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಾರುಕಟ್ಟೆಯಲ್ಲಿ ಎರಡು ಗುಬ್ಬಚ್ಚಿಗಳನ್ನು ಒಂದು ನಾಣ್ಯಕ್ಕೆ ಮಾರುತ್ತಾರೆ. ಆದರೆ ನಿಮ್ಮ ತಂದೆಯು ಅಪ್ಪಣೆ ಕೊಡದ ಹೊರತು ಅವುಗಳಲ್ಲಿ ಒಂದಾದರೂ ಸಾಯುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು.
Kannada BSI Bible 2016
ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಡ್ಡಿಗೆ ಎರಡು ಗುಬ್ಬಿಗಳನ್ನು ಮಾರುವದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಒಂದಾದರೂ ನೆಲಕ್ಕೆ ಬೀಳದು.
Kannada Bible (KNCL) BSI 2016
ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ರೂಪಾಯಿಗೆ ಎರಡು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ.