Matthew 10:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಭೂಲೋಕದಲ್ಲಿ ಶಾಂತಿಯನ್ನು ಉಂಟುಮಾಡಲು ನಾನು ಬಂದಿದ್ದೇನೆಂದು ಯೋಚಿಸಬೇಡಿ. ನಾನು ಶಾಂತಿಯನ್ನು ಉಂಟುಮಾಡಲು ಬರಲಿಲ್ಲ, ಖಡ್ಗ ಹಾಕಲು ಬಂದಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.
Kannada BSI Bible 2016
ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂಲೋಕದ ಮೇಲೆ ಸಮಾಧಾನ ಹುಟ್ಟಿಸುವದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವದಕ್ಕೆ ಬಂದೆನು.
Kannada Bible (KNCL) BSI 2016
“ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿ; ಸಮಾಧಾನವನ್ನಲ್ಲ, ಛೇದಿಸುವ ಖಡ್ಗವನ್ನು ತರಲು ಬಂದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಭೂಮಿಯ ಮೇಲೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿರಿ. ಸಮಾಧಾನವನ್ನಲ್ಲ, ಖಡ್ಗವನ್ನು ತರಲು ಬಂದೆನು.